ಕರ್ನಾಟಕಕ್ಕೆ ದಿನನಿತ್ಯ ಪ್ರಯಾಣ ನಡೆಸುವಲ್ಲಿ ಇನ್ನು ಮುಂದೆ ರೆಗ್ಯುಲರ್ ಪಾಸ್ ಅಗತ್ಯವಿಲ್ಲ ಗಡಿ ಪ್ರದೇಶಗಳ ಗ್ರಾಮಪಂಚಾಯತ್ ನಿವಾಸಿಗಳು ಜಿಲ್ಲೆಗೆ ಪ್ರವೇಶ ಮಾಡುವುದಿದ್ದರೆ ನೋಂದಣಿಯ ಅಗತ್ಯವಿಲ್ಲ

ಕರ್ನಾಟಕಕ್ಕೆ ದಿನನಿತ್ಯ ಪ್ರಯಾಣ ನಡೆಸುವಲ್ಲಿ ಇನ್ನು ಮುಂದೆ ರೆಗ್ಯುಲರ್ ಪಾಸ್ ಅಗತ್ಯವಿಲ್ಲ ಗಡಿ ಪ್ರದೇಶಗಳ ಗ್ರಾಮಪಂಚಾಯತ್ ನಿವಾಸಿಗಳು ಜಿಲ್ಲೆಗೆ ಪ್ರವೇಶ ಮಾಡುವುದಿದ್ದರೆ ನೋಂದಣಿಯ ಅಗತ್ಯವಿಲ್ಲ   : ಜಿಲ್ಲಾಧಿಕಾರಿ
ಕಾಸರಗೋಡು, ಆ.26: ಕಾಸರಗೋಡು ಜಿಲ್ಲೆಯಿಂದ ಕರ್ನಾಟಕಕ್ಕೆ ತೆರಳಿ ಮರಳುವ ದಿನನಿತ್ಯದ ಪ್ರಯಾಣಕ್ಕೆ ಇನ್ನು ಮುಂದೆ ರೆಗ್ಯುಲರ್ ಪಾಸ್ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು.
ಈ ಸಂಬಂಧ ಈಗ ಜಾರಿಯಲ್ಲಿರುವ ಆದೇಶವನ್ನು ಹಿಂತೆಗೆದುಕೊಂಡಿರುವುದಾಗಿ ಅವರು ಜಿಲ್ಲಾ ಮಟ್ಟದ ಕೊರೋನಾ ಕೋರ್ ಸಮಿತಿಯ ವೀಡೀಯೋ ಕಾನ್ ಫೆರೆನ್ಸ್ ನಲ್ಲಿ ತಿಳಿಸಿದರು. 

ಇದೇ ವೇಳೆ ಇನ್ನು ಮುಂದೆ ಆಂಟಿಜೆನ್ ಟೆಸ್ಟ್ ನಡೆಸಿ, ಅಲ್ಲಿ ಲಭಿಸುವ ನೆಗೆಟಿವ್ ಸರ್ಟಿಫಿಕೆಟ್ ಸಹಿತ ಕೋವಿಡ್ 19 ಜಾಗ್ರತಾ ಪೋರ್ಟಲ್ ನಲ್ಲಿ ನೋಂದಣಿ ನಡೆಸಿದರೆ ಮಾತ್ರ ಸಾಕಾಗುತ್ತದೆ ಎಂದವರು ನುಡಿದರು. 

ಇದಕ್ಕಾಗಿ ಜಿಲ್ಲಾ ವೈದ್ಯಾಧಿಕಾರಿ ತಲಪ್ಪಾಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಸೌಲಭ್ಯ ಏರ್ಪಡಿಸುವರು. ಪ್ರತಿ ಪ್ರಯಾಣಿಗ ತೆರಳುವಾಗ ಮತ್ತು ಮರಳುವಾಗ ಗೂಗಲ್ ಸ್ಪ್ರೆಡ್ ಶೀಟ್ ನಲ್ಲಿ ದಾಲಾತಿ ನಡೆಸಲಾಗುವುದು ಎಂದು ತಿಳಿಸಿದರು. 
ಪೆರ್ಲ, ಜಾಲ್ಸೂರು, ಮಾಣಿಮೂಲೆ, ಪಾಣತ್ತೂರು ಗಡಿರಸ್ತೆಗಳ ಮೂಲಕ ಕರ್ನಾಟಕಕ್ಕೆ ತೆರಳಲು ಅನುಮತಿ  

ಈಗ ಪ್ರಯಾಣಕ್ಕೆ ಅನುಮತಿ ನೀಡಲಾಗುರುವ ರಾಷ್ಟ್ರೀಯ ಹೆದ್ದಾರಿ 65 ಅಲ್ಲದೆ(ತಲಪ್ಪಾಡಿ ಚೆಕ್ ಪೋಸ್ಟ್) ಪೆರ್ಲ, ಜಾಲ್ಸೂರು, ಮಾಣಿಮೂಲೆ, ಪಾಣತ್ತೂರು ಎಂಬ ಪ್ರಧಾನ ರಸ್ತೆಗಳ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ತೆರಳು ಅನುಮತಿ ನೀಡಿರುವುದಾಗಿ ಜಿಲ್ಲಾಧಿಕಾರಿ ಸಭೆಯಲ್ಲಿ ಹೇಳಿದರು. ಈ ರಸ್ತೆಗಳಲ್ಲಿ ಪ್ರಯಾಣಿಸುವ ಮಂದಿ ಕೂಡ ಆಂಟಿಜೆನ್ ಟೆಸ್ಟ್ ನಡೆಸಿ ನೆಗೆಟಿವ್ ಸರ್ಟಿಫಿಕೆಟ್ ಸಹಿತ ಕೋವಿಡ್ 19 ಜಾಗ್ರತಾ ಪೋರ್ಟಲ್ ನಲ್ಲಿ ನೋಂದಣಿ ನಡೆಸಬೇಕು. ಈ ರಸ್ತೆಗಳ ಗಡಿಹೊಂದಿರುವ ಗ್ರಾಮಪಂಚಾಯತ್ ಗಳು ತಪಾಸಣೆಗೆ ಅಗತ್ಯವಿರುವ ಸೌಲಭ್ಯ ಏರ್ಪಡಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿ ಮತ್ತು ತಪಾಸಣೆ ನಡೆಸುವ ನಿಟ್ಟಿನಲ್ಲಿ ಅಗತ್ಯದ ವ್ಯವಸ್ಥೆ ಮಾಡಬೇಕು. ಇದಕ್ಕೆ ಬೇಕಿರುವ ತರಬೇತಿ ಮತ್ತು ತಾಂತ್ರಿಕ ಸೌಲಭ್ಯಗಳಿಗಾಗಿ ಜಿಲ್ಲಾ ವೈದ್ಯಾಧಿಕಾರಿಯನ್ನು ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ನುಡಿದರು. 
  ಗಡಿ ಪ್ರದೇಶದ ನಿವಾಸಿಗಳು ನೋಂದಣಿ ನಡೆಸದೆಯೇ ಆಗಮಿಸಬಹುದು. ಪೆರ್ಲ, ಜಾಲ್ಸೂರು, ಮಾಣಿಮೂಲೆ, ಪಾಣತ್ತೂರು ರಸ್ತೆಗಳ ಗಡಿ ಪ್ರದೇಶಗಳ ಗ್ರಾಮಪಂಚಾಯತ್ ನಿವಾಸಿಗಳು ಜಿಲ್ಲೆಗೆ ಪ್ರವೇಶ ಮಾಡುವುದಿದ್ದರೆ ನೋಂದಣಿಯ ಅಗತ್ಯವಿಲ್ಲ. ಆದರೆ ಆ ವ್ಯಕ್ತಿ ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿ ಬಿಟ್ಟು ಇತರ ಗ್ರಾಮ ಪಂಚಾಯತ್ಗೆ ಪ್ರವೇಶಿಸಕೂಡದು ಎಂಬುದನ್ನು ಖಚಿತಪಡಿಸುವ ಹೊಣೆ ಸಂಬಂಧಪಟ್ಟ ಗ್ರಾಮಪಂಚಾಯತ್ ಗಳದು ಎಂದು ಜಿಲ್ಲಾಧಿಕಾರಿ ಸಭೆಯಲ್ಲಿ ತಿಳಿಸಿದರು. 
 ಅಂಗಡಿಗಳು, ವ್ಯಾಪಾರ ಸಂಸ್ಥೆಗಳು ರಾತ್ರಿ 9 ಗಂಟೆ ವರೆಗೆ ಕಾರ್ಯಾಚರಿಸಬಹುದು
                             

Comments