ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಂತಾಪ

ಎಡನೀರು ಮಠದ ಕೇಶವಾನಂದ ಭಾರತಿ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
‘ದೀನದಲಿತರ ಸಬಲೀಕರಣಕ್ಕಾಗಿ ಮತ್ತು ಸಮುದಾಯದ ಸೇವೆಗಾಗಿ ಪೂಜ್ಯ ಕೇಶವಾನಂದ ಭಾರತಿ ಸ್ವಾಮೀಜಿ ಅವರನ್ನು ನಾವು ಸದಾ ನೆನೆಯುತ್ತೇವೆ. ಅವರು ಭಾರತದ ಶ್ರೀಮಂತ ಸಂಸ್ಕೃತಿ ಮತ್ತು ಶ್ರೇಷ್ಠ ಸಂವಿಧಾನದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಸ್ವಾಮೀಜಿ ಅವರು ಸದಾ ನಮ್ಮ ನೆನಪಿನಲ್ಲಿರುತ್ತಾರೆ.ಮುಂದಿನ ತಲೆಮಾರುಗಳಿಗೆ ಸ್ಫೂರ್ತಿಯಾಗಿರುತ್ತಾರೆ. ಓಂ ಶಾಂತಿ‘ ಎಂದು ಪ್ರಧಾನಿಯವರು ಟ್ವೀಟ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.
ಅಂತೆಯೇ ಗೃಹ ಸಚಿವ ಅಮಿತ್ ಶಾ ಕೂಡಾ ಟ್ವೀಟ್ ಮಾಡಿದ್ದು, ಸ್ವಾಮೀಜಿಯವರು ಅಗಲುವಿಕೆಗೆ ಸಂತಾಪ ಸೂಚಿಸಿದ್ದಾರೆ.

Comments