- Get link
- X
- Other Apps
- Get link
- X
- Other Apps
ಕಾಸರಗೋಡು, ಮೇ 14: ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 1092 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 733 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.
ನಿಗಾ
ಕಾಸರಗೋಡು ಜಿಲ್ಲೆಯಲ್ಲಿ 29444 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ ಮನೆಗಳಲ್ಲಿ 28428 ಮಂದಿ, ಸಾಂಸ್ಥಿಕವಾಗಿ 1016 ಮಂದಿ ನಿಗಾದಲ್ಲಿರುವರು. ನೂತನವಾಗಿ 6618 ಮಂದಿ ನಿಗಾ ಪ್ರವೇಶಿಸಿದ್ದಾರೆ. 2859 ಮಂದಿ ಶುಕ್ರವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 3708 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 1600 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.
089070 71830, 9020300004
ನೆಟ್ಟಣಿಗೆಯಲ್ಲಿ *ಉತ್ತಮ👆🏻 ಗುಣಮಟ್ಟದ ಗದ್ದೆಯ (ಊರಿನ) ಅಕ್ಕಿ* ಲಭ್ಯವಿದೆ ಬೇಕಾದವರು ಕೂಡಲೆ ಸಂಪರ್ಕಿಸಿ
______________________________________________
ಒಟ್ಟು ಗಣನೆ
ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 61524 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 43362 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಟೆಸ್ಟ್ ಪಾಸಿಟಿವಿಟಿ ರೇಟ್ 27.6 ಆಗಿದೆ. ಸದ್ರಿ 17722 ಮಂದಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ.
WITHOUT MASK CASES
ಮಾಸ್ಕ್ ಧರಿಸದೇ ಇದ್ದದ್ದಕ್ಕೆ 982 ಮಂದಿಗೆ ಕೇಸು
ಕಾಸರಗೋಡು, ಮೇ 14: ಕಾಸರಗೋಡು ಜಿಲ್ಲೆಯಲ್ಲಿ ಮೇ 12,13ರಂದು ಮಾಸ್ಕ್ ಧರಿಸದೇ ಅಡ್ಡಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ 982 ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಕೋವಿಡ್ 19 ಆದೇಶ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿ ಮೇ 12ರಂದು 10 ಮಂದಿ ವಿರುದ್ಧ, ಮೇ 13ರಂದು 13 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 116665 ಮಂದಿ ವಿರುದ್ಧ ಕೇಸು ದಾಖಲಾಗಿದೆ.
- Get link
- X
- Other Apps
Comments
Post a Comment