ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 1749 ಮಂದಿಗೆ ಕೋವಿಡ್ ಪಾಸಿಟಿವ್

 
ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 1749 ಮಂದಿಗೆ ಕೋವಿಡ್ ಪಾಸಿಟಿವ್ : 621 ಮಂದಿಗೆ ಕೋವಿಡ್ ನೆಗೆಟಿವ್ 
ಕಾಸರಗೋಡು, ಮೇ, 8 : ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 1749 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 621 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. 
                           ನಿಗಾ                            ಕಾಸರಗೋಡು ಜಿಲ್ಲೆಯಲ್ಲಿ 18510 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 17708 ಮಂದಿ ಮನೆಗಳಲ್ಲಿ, 802 ಮಂದಿ ಸಾಂಸ್ಥಿಕವಾಗಿ ನಿಗಾದಲ್ಲಿರುವರು. ನೂತನವಾಗಿ 1754 ಮಂದಿ ನಿಗಾ ಪ್ರವೇಶಿಸಿದ್ದಾರೆ. 934 ಮಂದಿ ಶನಿವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 3837 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 2080 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ. 
                             ಒಟ್ಟು ಗಣನೆ 
                                ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 55932 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ 39925 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 15599 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ. 
....

Comments