ಬಜಿಳಕರಿಯದ ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ 5 ಲಕ್ಷ.

ಕಾಸರಗೋಡು ಜಿಲ್ಲೆಯ ಪೈವಳಿಕೆ ವಲಯದ ಬಜಿಳಕರಿಯದ ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರದಿಂದ ಪರಮಪೂಜ್ಯ ಖಾವಂದರು ಮಂಜೂರು ಮಾಡಿದ 5 ಲಕ್ಷ ಮೊತ್ತದ ಡಿಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್ ಅವರು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು ಕಾಸರಗೋಡು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಅಶ್ವಥ್ ಪೂಜಾರಿ ಲಾಲ್ ಬಾಗ್, ಯೋಜನಾಧಿಕಾರಿ ಶ್ರೀ ಮುಕೇಶ್, ಸದಸ್ಯರಾದ ಹರೀಶ್ ಶೆಟ್ಟಿ ಕಡOಬಾರ್, ಪದಾಧಿಕಾರಿಗಳು,ಮೇಲ್ವಿಚಾರಕರು ವಿಭಾಗದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Comments