ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 555 ಮಂದಿಗೆ ಕೋವಿಡ್ ಪಾಸಿಟಿವ್ : 952 ಮಂದಿಗೆ ಕೋವಿಡ್ ನೆಗೆಟಿವ್


ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 555 ಮಂದಿಗೆ ಕೋವಿಡ್ ಪಾಸಿಟಿವ್ : 952 ಮಂದಿಗೆ ಕೋವಿಡ್ ನೆಗೆಟಿವ್ 
ಕಾಸರಗೋಡು, ಮೇ 23: ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 555 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 952 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು. 
                               ನಿಗಾ 
                                ಕಾಸರಗೋಡು ಜಿಲ್ಲೆಯಲ್ಲಿ 33924 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ ಮನೆಗಳಲ್ಲಿ 32841 ಮಂದಿ, ಸಾಂಸ್ಥಿಕವಾಗಿ 1083 ಮಂದಿ ನಿಗಾದಲ್ಲಿರುವರು. ನೂತನವಾಗಿ 1202 ಮಂದಿ ನಿಗಾ ಪ್ರವೇಶಿಸಿದ್ದಾರೆ. 1988 ಮಂದಿ ಭಾನುವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 2804 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 12718 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ. 
                          ಒಟ್ಟು ಗಣನೆ 
                               ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 67579 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 58800 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 128 ಮಂದಿ ಕೋವಿಡ್ ಸಂಬಂಧ ಮೃತಪಟ್ಟಿದ್ದಾರೆ. ಸದ್ರಿ 8301 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ. ಟೆಸ್ಟ್ ಪಾಸಿಟಿವಿಟಿ ರೇಟ್ 20 ಆಗಿದೆ. 
...............................

Comments