ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 677 ಮಂದಿಗೆ ಕೋವಿಡ್ ಪಾಸಿಟಿವ್ : 1707 ಮಂದಿಗೆ ಕೋವಿಡ್ ನೆಗೆಟಿವ್


ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 677 ಮಂದಿಗೆ ಕೋವಿಡ್ ಪಾಸಿಟಿವ್ : 1707 ಮಂದಿಗೆ ಕೋವಿಡ್ ನೆಗೆಟಿವ್ 

ಕಾಸರಗೋಡು, ಮೇ 19: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 677 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 1707 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು. 
                            ನಿಗಾ 
                             ಕಾಸರಗೋಡು ಜಿಲ್ಲೆಯಲ್ಲಿ 30974 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ ಮನೆಗಳಲ್ಲಿ 30017 ಮಂದಿ, ಸಾಮಸ್ಥಿಕವಾಗಿ 957 ಮಂದಿ ನಿಗಾದಲ್ಲಿರುವರು. ನೂತನವಾಗಿ 1895 ಮಂದಿ ನಿಗಾ ಪ್ರವೇಶಿಸಿದ್ದಾರೆ. 3146 ಮಂದಿ ಬುಧವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 3210 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 1108 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.  
                         ಒಟ್ಟು ಗಣನೆ 
                            ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 64944 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 55271 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 9207 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ. ಟೆಸ್ಟ್ ಪಾಸಿಟಿವಿಟಿ ರೇಟ್ 18 ಆಗಿದೆ. 

Comments