ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 461 ಮಂದಿಗೆ ಕೋವಿಡ್ ಪಾಸಿಟಿವ್ : 647 ಮಂದಿಗೆ ಕೋವಿಡ್ ನೆಗೆಟಿವ್


ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 461 ಮಂದಿಗೆ ಕೋವಿಡ್ ಪಾಸಿಟಿವ್ : 647 ಮಂದಿಗೆ ಕೋವಿಡ್ ನೆಗೆಟಿವ್ 
ಕಾಸರಗೋಡು, ಜೂ.2: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 461 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 647 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು. 
                             ನಿಗಾ 
                              ಕಾಸರಗೋಡು ಜಿಲ್ಲೆಯಲ್ಲಿ 25376 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 24355 ಮಂದಿ ಮನೆಗಳಲ್ಲಿ, 1021 ಮಂದಿ ಸಾಂಸ್ಥಿಕವಾಗಿ ನಿಗಾದಲ್ಲಿರುವರು. ನೂತನವಾಗಿ 2014 ಮಂದಿ ನಿಗಾ ಪ್ರವೇಶಿಸಿರುವರು. 2918 ಮಂದಿ ಬುಧವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 2690 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 725 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ. 
                            ಒಟ್ಟು ಗಣನೆ 
                               ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 72594 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 66234 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 5815 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ. 
                                ಟೆಸ್ಟ್ ಪಾಸಿಟಿವಿಟಿ ರೇಟ್ 18 ಆಗಿದೆ. 

Comments