ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 475 ಮಂದಿಗೆ ಕೋವಿಡ್ ಪಾಸಿಟಿವ್ : 375 ಮಂದಿಗೆ ಕೋವಿಡ್ ನೆಗೆಟಿವ್

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 475 ಮಂದಿಗೆ ಕೋವಿಡ್ ಪಾಸಿಟಿವ್ : 375 ಮಂದಿಗೆ ಕೋವಿಡ್ ನೆಗೆಟಿವ್

ಕಾಸರಗೋಡು, ಜೂ.12: ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 475 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 375 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು. 
                             ನಿಗಾ 
                               ಕಾಸರಗೋಡು ಜಿಲ್ಲೆಯಲ್ಲಿ 20544 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ ಮನೆಗಳಲ್ಲಿ 19705 ಮಂದಿ, ಸಾಂಸ್ಥಿಕವಾಗಿ 839 ಮಂದಿ ನಿಗಾದಲ್ಲಿರುವರು. ನೂತನವಾಗಿ 1128 ಮಂದಿ ನಿಗಾ ಪ್ರವೇಶಿಸಿದ್ದಾರೆ. 1451 ಮಂದಿ ಶನಿವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 3261 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 1451 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ. 
                              ಟೆಸ್ಟ್ ಪಾಸಿಟಿವಿಟಿ ರೇಟ್ 13.6 ಆಗಿದೆ. 
                       ಒಟ್ಟು ಗಣನೆ 
      ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 77108 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ವರೆಗೆ ಒಟ್ಟು 72602 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 3889 ಮಂದಿ ಕೋವಿಡ್ ಚಿಕಿತ್ಸೆಯಲ್ಲಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಮೃತಪಟ್ಟವರ ಸಂಖ್ಯೆ 183 ಆಗಿದೆ.  👇
*Subscribe our Youtube Channel*
👉🏻 *Fox24live news channel*

*Follow our Facebook Page*     👇
*Fox TwentyFour Livenews*

*Fox24live🦜* always with you 💐💐

Comments