- Get link
- X
- Other Apps
ನೆಕ್ರಾಜೆ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನಕ್ಕೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಭೇಟಿ
- Get link
- X
- Other Apps
ನೆಕ್ರಾಜೆ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನಕ್ಕೆ
ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಭೇಟಿ
ಬದಿಯಡ್ಕ : ಆಧುನಿಕ ಜಗತ್ತಿನಲ್ಲಿಯೂ ಜನಮನದಲ್ಲಿ ಭಕ್ತಿಯ ಭಾವ ಸದಾ ಜಾಗೃತವಾಗಿದೆ ಎಂಬುದಕ್ಕೆ ದೇಶದ ಮೂಲೆ ಮೂಲೆಗಳಲ್ಲಿಯೂ ಪ್ರತಿದಿನ ವಿವಿಧ ಆರಾಧನಾಲಯಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿರುವುದೇ ಸಾಕ್ಷಿಯಾಗಿದೆ. ದೇವಸ್ಥಾನಗಳು ಅಭಿವೃದ್ಧಿಯಾದಾಗ ಪ್ರತಿ ಮನೆಯೂ ಉದ್ಧಾರವಾಗುತ್ತದೆ. ಜನರ ಜೀವನದಲ್ಲಿ ಹೊಸ ಬೆಳಕು ಮೂಡುತ್ತದೆ. ಸುಸಂಸ್ಕೃತ ಬದುಕಿನಲ್ಲಿ ಆಚರಣೆಗಳು ಪ್ರಧಾನ ಪಾತ್ರವಹಿಸುತ್ತದೆ. ಆದುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ದೇವಸ್ಥಾನಗಳ ಅಭಿವೃದ್ಧಿ ಸಂತಸ ನೀಡುತ್ತದೆ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಅವರು ಹೇಳಿದರು. ಅವರು ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ನೆಕ್ರಾಜೆ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿಯಿತ್ತು ಅಲ್ಲಿನ ಕೆಲಸ ಕಾರ್ಯಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ
ಗಡಿ ಅಭಿವೃದ್ಧಿ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ
ನೆಕ್ರಾಜೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್ ಎನ್ ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಆಡಳಿತ ಸಮಿತಿ ಅಧ್ಯಕ್ಷ ವಿಶ್ವನಾಥ ಡಿ ಶೆಟ್ಟಿ, ಬ್ರಹ್ಮಕಲಶೋತ್ಸವದ ಪ್ರಧಾನ ಕಾರ್ಯದರ್ಶಿ ಗಣೇಶ್ ವತ್ಸಾ, ಧಾರ್ಮಿಕ ಮುಂದಾಳು ಪ್ರಭಾಕರ ಕಲ್ಲೂರಾಯ ಬನದಗದ್ದೆ, ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರತ್ನಾಕರ ಮಾವಿನಕಟ್ಟೆ.ಸಾಂಸ್ಕೃತಿಕ ಸಮಿತಿಯ ದಿವಾಕರ ಮಾವಿನಕಟ್ಟೆ,ಪ್ರಚಾರ ಸಮಿತಿಯ ಸಂಚಾಲಕ ಅಖಿಲೇಶ್ ನಗುಮುಗಂ, ಹರೀಶ್ ಗೋಸಾಡ.ಹಾಗೂ ಕುಟುಂಬಶ್ರೀ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು.ಮಾತೃ ಸಮಿತಿ ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವವು ಮೇ.7 ರಿಂದ 15ರ ವರೆಗೆ ನಡೆಯಲಿದೆ
- Get link
- X
- Other Apps
Comments
Post a Comment