ಕಾಸರಗೋಡಿನ ಕನ್ನಡ ಭವನದಲ್ಲಿ ನ.1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ..... !
ಕಾಸರಗೋಡು: ಕನ್ನಡ ಸಂಘ (ನೋಂ), ವಾಣಿಜ್ಯ ತೆರಿಗೆಗಳ ಇಲಾಖೆ, ಬೆಂಗಳೂರು ಹಾಗೂ ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯದ ಸಹಯೋಗದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ ನವೆಂಬರ್ 1ರಂದು ಭಾನುವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯದ ಸಭಾಂಗಣದಲ್ಲಿ ನಡೆಯಲಿದೆ.
ವಾಣಿಜ್ಯ ತೆರಿಗೆಗಳ ಅಪರ ಆಯುಕ್ತ (ಕೇಂದ್ರ ಕಚೇರಿ-1) ಎಂ.ಪಿ. ರವಿಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕನ್ನಡ ಭವನ ಮತ್ತು ಗ್ರಂಥಾಲಯದ ಸಂಸ್ಥಾಪಕ ಡಾ. ವಾಮನ್ರಾವ್ ಬೇಕಲ್ ಜ್ಯೋತಿ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಸ್ವಾಗತಿಸಲಿದ್ದಾರೆ. ವಾಣಿಜ್ಯ ತೆರಿಗೆಗಳ ಅಪರ ಆಯುಕ್ತ ಆರ್.ಡಿ. ಮೇಘಣ್ಣನವರ್ ಘನ ಉಪಸ್ಥಿತಿ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಾಣಿಜ್ಯ ತೆರಿಗೆಗಳ ಅಪರ ಆಯುಕ್ತ ಹಾಗೂ ಸೇವಾ ಅಧಿಕಾರಿಗಳ ಸಂಘದ ಅಧ್ಯಕ್ಷ ರಮೇಶ್ ಕುಮಾರ್, ವಾಣಿಜ್ಯ ತೆರಿಗೆಗಳ ಸಿ ಮತ್ತು ಡಿ ದರ್ಜೆ ನೌಕರರ ಸಂಘದ ಅಧ್ಯಕ್ಷ ಧರ್ಮರಾಜು ಸಿ., ಇಲಾಖೆಯ ಎಸ್ಸಿ/ಎಸ್ಟಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ. ದೊರೈ ಉಪಸ್ಥಿತರಿರಲಿದ್ದಾರೆ.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಕಾಸರಗೋಡಿನ ಹತ್ತು ಮಂದಿ ಸಾಧಕರನ್ನು ಕನ್ನಡ ಸಂಘದ ವತಿಯಿಂದ ಗೌರವಿಸಲಾಗುವುದು. ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಡಾ. ಸುರೇಶ್ ನೆಗಳಗುಳಿ, ಪ್ರದೀಪ್ ಬೇಕಲ್, ವಸಂತ ಕೆರೆಮನೆ, ಜಗನ್ನಾಥ ಶೆಟ್ಟಿ ಪಿ.ಕೆ., ಅಖಿಲೇಶ್ ನಗುಮುಗಮ್, ವಸಂತ ಭಾರಡ್ಕ, ಗುರುರಾಜ್ ಕಾಸರಗೋಡು, ಗಿರೀಶ್ ಪಿ.ಎಂ. ಚಿತ್ತಾರಿ ಹಾಗೂ ಮುರಳಿ ಪಾರೆಕಟ್ಟೆ ಗೌರವಕ್ಕೆ ಪಾತ್ರರಾಗಲಿದ್ದಾರೆ.
ಸಮಾರಂಭದ ಅಂಗವಾಗಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.), ಕಾಸರಗೋಡು ವತಿಯಿಂದ ಸಾಂಸ್ಕೃತಿಕ ಕಲಾ ವೈಭವ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಗುರುರಾಜ್ ಎಂ ಆರ್ ಮತ್ತು ಮಧು ಕೋಡನಾಡು ಕಾರ್ಯಕ್ರಮ ಕಾರ್ಯಕ್ರಮಕ್ಕೆ ಸಾರಥ್ಯ ನೀಡಲಿದ್ದಾರೆ
Comments
Post a Comment