ಕಾಸರಗೋಡು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ, ಶ್ರೀ ಎಡನೀರು ಮಠದಲ್ಲಿ “ವಂದೇಮಾತರಂ - 150”

ಕಾಸರಗೋಡು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ, ಶ್ರೀ ಎಡನೀರು ಮಠ ಮತ್ತು ಮಂಥನ ಕಾಸರಗೋಡು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ “ವಂದೇಮಾತರಂ - 150” ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಶ್ರೀ ಎಡನೀರು ಮಠದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್ ವಿಸ್ತೃತ ಉಪನ್ಯಾಸವನ್ನು ನೀಡಿದರು. ವೇದಿಕೆಯಲ್ಲಿ ಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಉಪಸ್ಥಿತರಿದ್ದು ಆಶೀರ್ವಚನದ ಮಾತುಗಳನ್ನಾಡಿದರು. ಇದೇ ಸಂದರ್ಭದಲ್ಲಿ ಹಿರಿಯ ಲೇಖಕ ನಾರಾಯಣ ಶೇವಿರೆ ರಚಿಸಿದ, ವಿಶ್ವ ಸಂವಾದ ಕೇಂದ್ರ ಕರ್ನಾಟಕ ಪ್ರಕಟಿಸಿದ “ಹಿಂದುತ್ವ, ಭಾರತ, ಸ್ವತ್ವ” ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಕಾಸರಗೋಡು ಜಿಲ್ಲಾ ಸಂಘಚಾಲಕ ಪ್ರಭಾಕರನ್ ಮಾಸ್ಟರ್ ಉಪಸ್ಥಿತರಿದ್ದರು.

Comments