ಕುಂಬಳೆ ಉಪಜಿಲ್ಲಾ ಕಲೋತ್ಸವ: ನೋಂದಣಿ ಪ್ರಕ್ರಿಯೆ ಆರಂಭ

ಕುಂಬಳೆ ಉಪಜಿಲ್ಲಾ ಕಲೋತ್ಸವ: ನೋಂದಣಿ ಪ್ರಕ್ರಿಯೆ ಆರಂಭ
ಬದಿಯಡ್ಕ: ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ನೋಂದಣಿ ಪ್ರಕ್ರಿಯೆ ಶುಕ್ರವಾರ ಪೆರಡಾಲ ನವಜೀವನ ಶಾಲೆಯಲ್ಲಿ ಜರಗಿತು. ಪ್ರೋಗ್ರಾಂ ಕಮಿಟಿ ಅಧ್ಯಕ್ಷರಾದ ಆನಂದ ಮವ್ವಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ನೋಂದಣಿ ಸಮಿತಿ ಅಧ್ಯಕ್ಷ ಹಾಗೂ ಬದಿಯಡ್ಕ ಪಂಚಾಯಿತಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಎ.ಎಲ್.ಪಿ.ಎಸ್. ಏತ್ತಡ್ಕ ಶಾಲೆಯ ಮುಖ್ಯೋಪಾಧ್ಯಾಯರಾದ ರಾಜಾರಾಮ್ ಕೆ.ವಿ. ಅವರಿಗೆ ನೋಂದಣಿ ಕಿಟ್ ನೀಡುವ ಮೂಲಕ ಉದ್ಘಾಟಿಸಿದರು. ಪಿ.ಟಿ.ಎ. ಅಧ್ಯಕ್ಷ, ಬದಿಯಡ್ಕ ಗ್ರಾಮಪಂಚಾಯಿತಿ ಅಭಿವೃದ್ಧಿ ಸ್ಥಾಯಿಸಮಿತಿ ಅಧ್ಯಕ್ಷ ಹಮೀದ್ ಕೆಡೆಂಜಿ, ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿಸಮಿತಿ ಅಧ್ಯಕ್ಷ ಅವಿನಾಶ್ ರೈ, ವರ್ಕಿಂಗ್ ಕಮಿಟಿ ಅಧ್ಯಕ್ಷ ಶ್ಯಾಮ್ ಪ್ರಸಾದ್ ಮಾನ್ಯ ಶುಭಹಾರೈಸಿ ಮಾತನಾಡಿದರು. ಜನಪ್ರತಿನಿಧಿಗಳಾದ ಗಂಗಾಧರ ಗೋಳಿಯಡ್ಕ, ಶ್ಯಾಮಪ್ರಸಾದ ಸರಳಿ, ಮಧುಸೂದನ ಕಂಗಿಲ ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರೋಗ್ರಾಂ ಕಮಿಟಿ ಕನ್ವೀನರ್ ಪ್ರಭಾಕರನ್ ನಾಯರ್ ಸ್ವಾಗತಿಸಿ, ನೋಂದಣಿ ಸಮಿತಿ ಕನ್ವೀನರ್ ನಟರಾಜ ರಾಜ್ ಪಿ. ವಂದಿಸಿದರು.

Comments