ಭರತನಾಟ್ಯ ಸಾಧಕಿ ಅಪೂರ್ವ ಎಡಕ್ಕಾನ FOX24live News kerala

ಭರತನಾಟ್ಯ ಸಾಧಕಿ ಅಪೂರ್ವ ಎಡಕ್ಕಾನ
ಕರ್ನಾಟಕದ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯ ಸಂಘಟಿಸಿದ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳೊಂದಿಗೆ ತೇರ್ಗಡೆಯನ್ನು ಹೊಂದಿರುವ ಅಪೂರ್ವ, ನಾಟ್ಯ ವಿದ್ಯಾನಿಲಯ ರಿಜಿಸ್ಟರ್ಡ್ ಕುಂಬಳೆ ಸಂಸ್ಥೆಯ ವಿದುಷಿ ಡಾ|ವಿದ್ಯಾ ಲಕ್ಷ್ಮಿ ಕುಂಬಳೆ ಅವರ ಶಿಷ್ಯರಾಗಿದ್ದಾರೆ. ಒಂದನೇ ತರಗತಿಯಿಂದಲೇ ಭರತನಾಟ್ಯವನ್ನು ಅಭ್ಯಾಸ ಮಾಡಲು ಪ್ರಾರಂಭಿಸಿರುವ ಇವರು ಶಾಲಾ ಕಲೋತ್ಸವದಲ್ಲಿ ಒಂದರಿಂದ 12ನೇ ತರಗತಿಯವರೆಗೆ ನಿರಂತರವಾಗಿ ಭಾಗವಹಿಸುತ್ತಾ 10 ಹಲವಾರು ಬಹುಮಾನಗಳನ್ನು ಮಡಿಲಿಗೆ ಹಾಕಿಕೊಂಡಿದ್ದಾರೆ. ಪ್ರಸ್ತುತ ಜಿ ಎಚ್ ಎಸ್ ಶಿರಿಯ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುವ ಇವರು ಸಹ್ಯಾದ್ರಿ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ತಾಂತ್ರಿಕ ಶಿಕ್ಷಣವನ್ನು ಪೂರೈಸಿರುತ್ತಾರೆ.

ಭರತನಾಟ್ಯದಲ್ಲಿ ಸೀನಿಯರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಚೇತನ್ ಎಡಕ್ಕಾನ. ಕರ್ನಾಟಕದ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ಸಂಘಟಿಸಿದ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಪ್ರಸ್ತುತ ಅಗಲ್ಪಾಡಿ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಿದ್ದಾರೆ.

ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ನೂತನ್ ಎಡಕ್ಕಾನ. ಕರ್ನಾಟಕದ ಗಂಗುಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ಸಂಘಟಿಸಿದ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಪ್ರಸ್ತುತ ಅಗಲ್ಪಾಡಿ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಿದ್ದಾರೆ.
ಭರತನಾಟ್ಯ ಸಾಧಕ ಸಾತ್ವಿಕ್ ನೀರ ಮೂಲ
ಕರ್ನಾಟಕದ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ಸಂಘಟಿಸಿದ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಹತ್ತು ಹಲವಾರು ವೇದಿಕೆಗಳಲ್ಲಿ ಭರತನಾಟ್ಯ ಪ್ರದರ್ಶನವನ್ನು ನೀಡಿರುವ ಇವರು ಪ್ರಸ್ತುತ ಚೇವಾರು ಶ್ರೀ ಶಾರದಾ ಎಯುಪಿ ಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ.

Comments