ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವಕ್ಕೆ ವಿದ್ಯುಕ್ತ ಚಾಲನೆ
ಏಷ್ಯಾದ ಅತಿದೊಡ್ಡ ಶಾಲಾ ಕಲೋತ್ಸವವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕೇರಳ ಶಾಲಾ ಕಲೋತ್ಸವದ ಅಂಗವಾಗಿ ನಡೆಯುವ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವಕ್ಕೆ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಅವರು ವಿದ್ಯುಕ್ತವಾಗಿ ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಖ್ಯಾತ ಉದ್ಯಮಿ ಡಾ. ಸದಾಶಿವ ಶೆಟ್ಟಿ ಅವರು ಕಲೋತ್ಸವದಲ್ಲಿ ವಿಜೇತರಾಗುವ ಮಕ್ಕಳಿಗೆ ನೀಡಲಾಗುವ ಟ್ರೋಫಿಗಳನ್ನು ಪ್ರದರ್ಶಿಸುವ 'ಟ್ರೋಫಿ ಕಾರ್ನರ್' ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಸಿ ಎ.ತಾಜುದ್ದೀನ್ ಅವರು ವಹಿಸಿದ್ದರು. ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ನಾರಾಯಣ ದೇಲಂಪಾಡಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ಕಲೋತ್ಸವದ ಉದ್ದೇಶ ಹಾಗೂ ಆಯೋಜನೆಯ ಕುರಿತು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ ಎಸ್.ಆರ್. ಅವರು ಭಾಗವಹಿಸಿದ್ದರು. ಮಂಗಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಗೋಲ್ಡನ್ ಅಬ್ದುಲ್ ರಹಿಮಾನ್, ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಹರ್ಷದ್ ವರ್ಕಾಡಿ, ರೆವರೆಂಡ್ ಫಾದರ್ ಡೇನಿಯಲ್ ಡಿ'ಸೋಜಾ, ಡಾ. ಜಯಪ್ರಕಾಶ್ ನಾರಾಯಣ, ಶ್ರೀಧರ್ ರಾವ್ ಆರ್.ಎಂ., ಜನರಲ್ ಕನ್ವೀನರ್ ರಮೇಶ್ ಕೆ. ಸೇರಿದಂತೆ ಹಲವು ರಾಜಕೀಯ ಹಾಗೂ ಸಾಮಾಜಿಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾವರ್ಧಕ ಎ.ಯು.ಪಿ. ಶಾಲೆಯ ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿ ಅವರು ಸ್ವಾಗತಿಸಿದರು. ಸ್ವಾಗತ ಸಮಿತಿಯ ಸಂಚಾಲಕ ರವಿಲೋಚನ ಅವರು ವಂದನಾರ್ಪಣೆಗೈದರು. ರಾಮಚಂದ್ರ ಮಾಸ್ಟರ್ ಅವರು ಕಾರ್ಯಕ್ರಮ ನಿರೂಪಿಸಿದರು.




Comments
Post a Comment